Micah 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
Kannada BSI Bible 2016
ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು; ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.
Kannada Bible (KNCL) BSI 2016
ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.