Micah 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.
Kannada BSI Bible 2016
ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.
Kannada Bible (KNCL) BSI 2016
ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. ಆದರೆ ನಾವು ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.