Micah 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
Kannada BSI Bible 2016
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.
Kannada Bible (KNCL) BSI 2016
ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.