Micah 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
Kannada BSI Bible 2016
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
Kannada Bible (KNCL) BSI 2016
ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.