Micah 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ನಿನ್ನ ಕುದುರೆಗಳನ್ನು ನಾನು ತೆಗೆದುಬಿಡುವೆನು. ನಿನ್ನ ರಥಗಳನ್ನು ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.
Kannada BSI Bible 2016
ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.