Micah 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನ ಅಶೇರ ಸ್ತಂಭಗಳನ್ನೂ ಸುಳ್ಳು ದೇವರುಗಳನ್ನೂ ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.
Kannada BSI Bible 2016
ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.
Kannada Bible (KNCL) BSI 2016
ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶಮಾಡುವೆನು.