Micah 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
Kannada BSI Bible 2016
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.
Kannada Bible (KNCL) BSI 2016
ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.