Micah 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು
Kannada BSI Bible 2016
ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.
Kannada Bible (KNCL) BSI 2016
ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.