Micah 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.
Kannada BSI Bible 2016
ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.
Kannada Bible (KNCL) BSI 2016
ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.