Micah 5:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
Kannada BSI Bible 2016
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.