Micah 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Kannada BSI Bible 2016
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬಿತ್ತಿದರೂ ಕೊಯ್ಯುವದಿಲ್ಲ; ಎಣ್ಣೆಯ ಕಾಯಿಯನ್ನು ತುಳಿದರೂ ಮೈಗೆ ಎಣ್ಣೆ ಹಚ್ಚಿಕೊಳ್ಳುವದಿಲ್ಲ, ದ್ರಾಕ್ಷೆಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವದಿಲ್ಲ.
Kannada Bible (KNCL) BSI 2016
ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.