Micah 6:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”
Kannada BSI Bible 2016
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.
Kannada Bible (KNCL) BSI 2016
“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.