Micah 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರಗಳೇ ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”
Kannada BSI Bible 2016
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.
Kannada Bible (KNCL) BSI 2016
“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.