Micah 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
Kannada BSI Bible 2016
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
Kannada Bible (KNCL) BSI 2016
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.