Micah 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
Kannada BSI Bible 2016
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
Kannada Bible (KNCL) BSI 2016
ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?