Micah 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು.
Kannada BSI Bible 2016
ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು.
Kannada Bible (KNCL) BSI 2016
ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ.