Micah 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.
Kannada BSI Bible 2016
ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು.
Kannada Bible (KNCL) BSI 2016
ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.