Micah 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.
Kannada BSI Bible 2016
ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುತ್ರನನ್ನು ನಂಬಬೇಡ; ಆಪ್ತನಲ್ಲಿ ಭರವಸವಿಡದಿರು; ನಿನ್ನ ಎದೆಯ ಮೇಲೆ ಒರಗುವವಳಿಗೂ ನಿನ್ನ ಬಾಯಬಾಗಲನ್ನು ಭದ್ರವಾಗಿಟ್ಟುಕೋ.
Kannada Bible (KNCL) BSI 2016
ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.