Micah 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
Kannada BSI Bible 2016
ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ.
Kannada Bible (KNCL) BSI 2016
ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.