Nahum 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
Kannada BSI Bible 2016
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.
Kannada Bible (KNCL) BSI 2016
ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.