Nahum 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.
Kannada BSI Bible 2016
ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು.
Kannada Bible (KNCL) BSI 2016
ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.