Nahum 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”
Kannada BSI Bible 2016
ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು.
Kannada Bible (KNCL) BSI 2016
ಆ ಶತ್ರು ನಿಮ್ಮ ಮೇಲೆ ಹೇರಿದ ನೊಗವನ್ನು ಈಗ ನಿಮ್ಮಿಂದ ತೆಗೆದು ಮುರಿದುಬಿಡುವೆನು. ನಿಮ್ಮ ಸಂಕೋಲೆಗಳನ್ನು ಕಿತ್ತುಹಾಕುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.