Nahum 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.
Kannada BSI Bible 2016
ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,
Kannada Bible (KNCL) BSI 2016
ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.