Nahum 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
Kannada BSI Bible 2016
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
Kannada Bible (KNCL) BSI 2016
ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.