Nahum 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
Kannada BSI Bible 2016
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.
Kannada Bible (KNCL) BSI 2016
ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.