Nahum 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.
Kannada BSI Bible 2016
ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.
Kannada Bible (KNCL) BSI 2016
ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.