Nahum 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.
Kannada BSI Bible 2016
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.
Kannada Bible (KNCL) BSI 2016
ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.