Nahum 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
Kannada BSI Bible 2016
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
Kannada Bible (KNCL) BSI 2016
ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.