Nahum 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.
Kannada BSI Bible 2016
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.
Kannada Bible (KNCL) BSI 2016
ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.