Nahum 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
Kannada BSI Bible 2016
ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೃಗರಾಜರ ಗವಿ, ಪ್ರಾಯದ ಸಿಂಹಗಳ ಹಕ್ಕೆ ಎಲ್ಲಿ? ಸಿಂಹ, ಸಿಂಹಿ, ಸಿಂಹದ ಮರಿ, ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
Kannada Bible (KNCL) BSI 2016
ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ?