Nahum 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
Kannada BSI Bible 2016
ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಹಿಸುಕುತ್ತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಹಕ್ಕೆಗಳನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
Kannada Bible (KNCL) BSI 2016
ಅಲ್ಲಿ ಸಿಂಹಬೇಟೆಯನ್ನು ಸೀಳಿಹಾಕುತ್ತಿತ್ತು ತನ್ನ ಮರಿಗಳಿಗಾಗಿ; ಕೊರಳುಹಿಡಿದು ಪ್ರಾಣಿಗಳನ್ನು ಹೊಸಕುತ್ತಿತ್ತು ಸಿಂಹಿಣಿಗಳಿಗಾಗಿ; ಗವಿಗಳನ್ನು ಬೇಟೆಯಿಂದ, ಹಕ್ಕೆಗಳನ್ನು ಮಾಂಸದಿಂದ ತುಂಬಿಸುತ್ತಿತ್ತು ಅವುಗಳಿಗಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹವು, ತನ್ನ ಮರಿಗಳಿಗೆ, ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದ ತನ್ನ ಗುಹೆಯನ್ನು ತುಂಬಿಸುತ್ತಿತ್ತು.