Nahum 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಗೋಳಾಡುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ.
Kannada BSI Bible 2016
ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ.
Kannada Bible (KNCL) BSI 2016
ಸೆರೆಹಿಡಿದಿರುವರು ರಾಣಿಯನು; ತಂದಿಹರು ಆಕೆಯನು ಬೈಲಿಗೆ. ದಾಸಿಯರು ಬಡಿದುಕೊಳ್ಳುತಿಹರು ಎದೆ; ರೋದಿಸುತಿಹರು ಪಾರಿವಾಳಗಳಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನೆವೆಯು ಸೆರೆಯಾಗಿ ಹೋಗಬೇಕೆಂಬ ಆಜ್ಞೆಯಾಗಿದೆ. ಅವಳ ದಾಸಿಯರು ಪಾರಿವಾಳಗಳಂತೆ ರೋದಿಸುವರು, ತಮ್ಮ ಎದೆಗಳನ್ನು ಬಡಿದುಕೊಳ್ಳುವರು.