Nahum 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.
Kannada BSI Bible 2016
ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.
Kannada Bible (KNCL) BSI 2016
ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.