Nahum 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.
Kannada BSI Bible 2016
ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧ ಶ್ರೇಷ್ಠವಸ್ತುಗಳ ನಿಧಿಗೂ ಪಾರವೇ ಇಲ್ಲ.
Kannada Bible (KNCL) BSI 2016
ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳ್ಳಿಯನ್ನು ಸುಲಿದುಕೊಳ್ಳಿರಿ; ಬಂಗಾರವನ್ನು ಸುಲಿದುಕೊಳ್ಳಿರಿ. ಕೂಡಿಸಿಟ್ಟ ಧನಕ್ಕೂ, ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.