Nahum 3:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.
Kannada BSI Bible 2016
ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿಬಿಟ್ಟರು; ಅದರ ಘನವಂತರಿಗೋಸ್ಕರ ಚೀಟುಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.
Kannada Bible (KNCL) BSI 2016
ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.