Nahum 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವರಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ.
Kannada BSI Bible 2016
ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿವಿುತ್ತ ಆಶ್ರಯವನ್ನು ಹುಡುಕುವಿ.
Kannada Bible (KNCL) BSI 2016
“ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.