Nahum 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.
Kannada BSI Bible 2016
ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವದು.
Kannada Bible (KNCL) BSI 2016
ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.