Nahum 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.
Kannada BSI Bible 2016
ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪ್ರಭುಗಳು ವಿುಡತೆಗಳಂತಿದ್ದಾರೆ, ವಿುಡತೆಯ ದಂಡು ಶೀತದಿನದಲ್ಲಿ ಬೇಲಿಗಳೊಳಗೆ ಇಳಿದಿದ್ದು ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.
Kannada Bible (KNCL) BSI 2016
ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಾವಲುಗಾರರು ಮಿಡತೆಗಳ ಹಾಗೆಯೂ, ನಿನ್ನ ಅಧಿಪತಿಗಳು ತಂಪಾದ ದಿವಸದಲ್ಲಿ ಬೇಲಿಗಳೊಳಗೆ ಇಳಿದುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ. ಸೂರ್ಯೋದಯವಾಗುವಾಗ ಹಾರಿ ಹೋಗುತ್ತವೆ. ಆಗ ಅವು ಎಲ್ಲಿದ್ದಾವೆಂದು ಅವುಗಳ ಸ್ಥಳವು ತಿಳಿಯುವುದಿಲ್ಲ.