Nahum 3:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.
Kannada BSI Bible 2016
ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘನಿದ್ರೆಮಾಡುತ್ತಿದ್ದಾರೆ; ನಿನ್ನ ಮಹನೀಯರು ಒರಗಿಹೋಗಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸತಕ್ಕವರು ಯಾರೂ ಇಲ್ಲ.
Kannada Bible (KNCL) BSI 2016
“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.