Nahum 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.
Kannada BSI Bible 2016
ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?
Kannada Bible (KNCL) BSI 2016
ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ?