Nahum 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.
Kannada BSI Bible 2016
ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ - ನಿನೆವೆಯೂ ಹಾಳಾಯಿತಲ್ಲಾ, ಯಾರು ಗೋಳಾಡಾರು, ನಿನ್ನನ್ನು ಸಂತೈಸತಕ್ಕವರು ನನಗೆ ಎಲ್ಲಿ ಸಿಕ್ಕಾರು ಅಂದುಕೊಳ್ಳುವನು.
Kannada Bible (KNCL) BSI 2016
ನಿನ್ನ ನೋಡುವವರು ನಿನ್ನಿಂದ ದೂರ ಓಡುವರು “ನಿನೆವೆ ಹಾಳುಬಿದ್ದಿದೆ, ಅದಕ್ಕೆ ಗೋಳಿಡುವರಾರು? ಅದನ್ನು ಸಂತೈಸುವವರು ನಮಗೆಲ್ಲಿ ಸಿಕ್ಕಿಯಾರು?, ಎಂದುಕೊಳ್ಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”