Nahum 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.
Kannada BSI Bible 2016
ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನೋ ಆಮೋನಿಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು, ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.
Kannada Bible (KNCL) BSI 2016
“ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತ ನೀನು ಒಳ್ಳೆಯವಳೋ? ಅವಳ ಸುತ್ತಲೂ ನೀರಿತ್ತು. ನದಿ ಅವಳ ರಕ್ಷಣೆ, ನೀರು ಅವಳ ಗೋಡೆ.