Nehemiah 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.
Kannada BSI Bible 2016
ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.
Kannada Bible (KNCL) BSI 2016
ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.