Nehemiah 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.
Kannada BSI Bible 2016
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.
Kannada Bible (KNCL) BSI 2016
ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.