Nehemiah 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.
Kannada BSI Bible 2016
ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ
Kannada Bible (KNCL) BSI 2016
ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.