Nehemiah 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.
Kannada BSI Bible 2016
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.
Kannada Bible (KNCL) BSI 2016
ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.