Nehemiah 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
Kannada BSI Bible 2016
ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
Kannada Bible (KNCL) BSI 2016
ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.