Nehemiah 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,
Kannada BSI Bible 2016
ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,
Kannada Bible (KNCL) BSI 2016
ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,