Nehemiah 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, “ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;
Kannada BSI Bible 2016
ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು;
Kannada Bible (KNCL) BSI 2016
ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.