Nehemiah 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.
Kannada BSI Bible 2016
ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.
Kannada Bible (KNCL) BSI 2016
ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.